• Wed. Sep 9th, 2026

ಇಂಡಿ ಉಪನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಿಢೀರ ದಾಳಿ

ByAnand

Jul 2, 2026

ವರದಿ. ✍️ಆನಂದ್.ಅಗರಖೇಡ

ಇಂಡಿ

ಇಂಡಿ ನಗರದ ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.ದಾಳಿ ವೇಳೆ ಕಚೇರಿಯಲ್ಲಿ 50 ಸಾವಿರ ನಗದು ಪತ್ತೆಯಾಗಿದ್ದು,ಕಚೇರಿಗೆ ಸಂಬಂಧಿಸದ ಐವರು ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ದಾಳಿಯ ಸಂದರ್ಭದಲ್ಲಿ ಕಚೇರಿಯಲ್ಲಿದ್ದ ದಾಖಲೆಗಳು, ಕಡತಗಳು ಹಾಗೂ ವಿವಿಧ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದರು. ಕಚೇರಿಯಲ್ಲಿ ಇದ್ದ ಕೆಲವು ಬಾಂಡ್ ರೈಟರ್‌ಗಳು ಹಾಗೂ ಏಜೆಂಟ್‌ಗಳ ಉಪಸ್ಥಿತಿಯ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದರು.

ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಅಕ್ರಮಗಳ ಕುರಿತು ದೊರೆತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತನಿಖೆ ಇನ್ನೂ ಮುಂದುವರಿದಿದ್ದು, ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿಯನ್ನು ಬಿಡುಗಡೆ ಮಾಡುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

By Anand

ಸಿಂಧೂರ ಸಾಮ್ರಾಜ್ಯ 24x7 ನ್ಯೂಸ್

Leave a Reply

Your email address will not be published. Required fields are marked *